ಜೆಇ ಪರೀಕ್ಷೆ ಅಕ್ರಮ: ಶಿಕ್ಷಕ ಸಸ್ಪೆಂಡ್

ಜೆಇ ಪರೀಕ್ಷೆ
Advertisement

ವಿಜಯಪುರ: ಬ್ಲೂಟೂತ್ ಮೂಲಕ ಉತ್ತರಗಳನ್ನು ಹೇಳಿರುವ ಆರೋಪದ ಹಿನ್ನೆಲೆಯಲ್ಲಿ ವಿಜಯಪುರದ ಓರ್ವ ಶಿಕ್ಷಕನನ್ನು ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ಉಮೇಶ ಶಿರಹಟ್ಟಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರ್ಗಿ ಜಿಲ್ಲೆಯ ಬಾಲಾಜಿ ಪಾಲಿಟೆಕ್ನಿಕ್ ಪರೀಕ್ಷಾ ಕೇಂದ್ರದಲ್ಲಿ ಪಿಡಬ್ಲೂಡಿ ಇಲಾಖೆ ಜೆಇ, ಎಇ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಆ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಂದಗಿ ತಾಲೂಕಿನ ಗುತ್ತರಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ಗೊಲ್ಲಾಳಪ್ಪ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಉಳಿದಂತೆ ಶಿಕ್ಷಕ ಗೊಲ್ಲಾಳಪ್ಪ ಮೊಬೈಲ್‌ನಲ್ಲಿ ಪ್ರಶ್ನೆಪತ್ರಿಕೆ ಫೋಟೋ ತೆಗೆದು ಬ್ಲೂಟೂತ್ ಮೂಲಕ ಉತ್ತರ ಹೇಳಿರುವ ಆರೋಪ ಎದುರಿಸುತ್ತಿದ್ದು, ಈ ಕುರಿತು ಬೆಂಗಳೂರಿನ ಅನ್ನಪೂರ್ಣೆಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.