ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಕಾಂಗ್ರೆಸ್ ಹಮ್ಮಿಕೊಂಡ ಭಾರತ್ ಜೋಡೋ ಯಾತ್ರೆ ನಾಳೆ ಸೆಪ್ಟೆಂಬರ್ 30ರಂದು ರಾಜ್ಯಕ್ಕೆ ಆಗಮಿಸಲಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಾಳೆ ಮುಂಜಾನೆ 9ಗಂಟೆಯ ಸುಮಾರಿಗೆ ಯಾತ್ರೆ ಕರ್ನಾಟಕ್ಕೆ ಆಗಮಿಸಲಿದ್ದು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಗುಂಡ್ಲುಪೇಟೆಗೆ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲಿಸಿದರು. ಇನ್ನು 21 ದಿನಗಳ ಕಾಲ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯಲಿದೆ.