ಕಾಂಗ್ರೆಸ್‌ ಬೇಲ್ ಪಾರ್ಟಿ: ಬೊಮ್ಮಾಯಿ

ಸಿಎಂ ಬೊಮ್ಮಾಯಿ
Advertisement

ಬೆಂಗಳೂರು: ಭಾರತ್ ಜೋಡೋ ಯಾತ್ರೆ(ಸಿನಿಸ್ಟರ್) ದುರುದ್ದೇಶದ ಆಂದೋಲನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಜಯಂತಿಯ ಈ ಸಂದರ್ಭದಲ್ಲಿ ನಕಲಿ ಗಾಂಧಿಗಳ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಇಡೀ ಪಕ್ಷ ಜಾಮೀನಿನ ಮೇಲಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಜಾಮೀನಿನ ಮೇಲಿದ್ದು, ಅದೊಂದು ಬೇಲ್ ಪಾರ್ಟಿ. ಎಲ್ಲವೂ ಭ್ರಷ್ಟಾಚಾರದ ಆರೋಪದ ಮೇಲೆಯೇ ಇದೆ. ಕೆಪಿಸಿಸಿ ಅಧ್ಯಕ್ಷರು ಪಾದಯಾತ್ರೆಗೆ ಬಹಳ ಕಷ್ಟಪಡುತ್ತಿದ್ದಾರೆ. 2-3 ವರ್ಷಗಳಿಂದ ಪ್ರಕರಣ ನಡೆಯುತ್ತಿದೆ. ಹಿಂದೆ ಅವರಿಗೆ ಕರ್ನಾಟಕ ಎಟಿಎಂ ಆಗಿತ್ತು, ಈಗಿಲ್ಲ ಎಂಬ ಕೊರಗಿರಬಹುದು. ಇಲ್ಲಿ 40% ಇಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಯಾರಾದರೂ, ಎಲ್ಲಾದರೂ ಹೀಗೆ ನಡೆದಿದೆ ಎಂದು ದಾಖಲೆ ನೀಡಿದರೆ ತನಿಖೆ ಮಾಡಿಸುವುದಾಗಿ ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.