ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೋ ಯಾತ್ರೆ ಇಂದು ಮಂಡ್ಯ ಜಿಲ್ಲೆಗೆ ಕಾಲಿಟ್ಟಿದ್ದು, ಮಂಡ್ಯದಲ್ಲಿ ʻಕೈʼ ಕಾರ್ಯಕರ್ತರು ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಯಾತ್ರೆಯಲ್ಲಿ ಜನರನ್ನು ನಿಯಂತ್ರಣ ಮಾಡುವ ವೇಳೆ ಪೊಲೀಸರು ಮತ್ತು ಜನರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ನಲಪಾಡ್ ಓಡಿ ಬಂದು ಕೈ ಮುಗಿದು ಜನರನ್ನು ನಿಯಂತ್ರಿಸಲು ಮುಂದಾಗಿದ್ದಾರೆ. ಆಗ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರು ಹೇ.. ಇದು ಬೆಂಗಳೂರು ಅಲ್ಲ ಎಂದು ನಲಪಾಡ್ಗೆ ಆವಾಜ್ ಹಾಕಿದ್ದಾರೆ. ಬಳಿಕ ಮೊಹಮ್ಮದ್ ನಲಪಾಡ್ ಕೈ ಮುಗಿದು ವಾಪಸ್ ನಡೆದಿದ್ದಾರೆ.