ಬೆಂಗಳೂರು: ನಾವು ದೇಶದ ‘ಮಾತೃಶಕ್ತಿ’ ಜೊತೆ ನಿಲ್ಲುತ್ತೇವೆ ಎಂಬುದು ಬಿಜೆಪಿಯ ನಿಲುವು ಸ್ಪಷ್ಟವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ವಿವಾದ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಬಿಜೆಪಿಯ ನಿಲುವು ಈ ವಿಚಾರದಲ್ಲಿ ಸ್ಪಷ್ಟವಾಗಿದೆ- ನಾವು ನಾರಿ ಶಕ್ತಿಯೊಂದಿಗೆ ನಿಲ್ಲುತ್ತೇವೆ” ಎಂದು ಅವರು ಹೇಳಿದರು. ಈ ಪ್ರಕರಣದಲ್ಲಿ ಇದುವರೆಗೆ ಕ್ರಮ ಕೈಗೊಳ್ಳದಿರುವ ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಕೂಡ ಗೃಹ ಸಚಿವರು ಮತ್ತಷ್ಟು ತರಾಟೆಗೆ ತೆಗೆದುಕೊಂಡರು. “ಚುನಾವಣೆಯ ಸಂದರ್ಭದಲ್ಲಿಯೇ ಈ ವಿಡಿಯೋ ಯಾಕೆ ಹರಿದಾಡಬೇಕು? ಈ ಸಮಯ ಸಾಧಕತನ ಸಂಶಯ ಮೂಡಿಸುತ್ತಿದೆ ಎಂದವರು ಹೇಳಿದ್ದಾರೆ. ನಾನು ಕಾಂಗ್ರೆಸ್ ಅನ್ನು ಕೇಳಲು ಬಯಸುತ್ತೇನೆ, ಯಾರ ಸರ್ಕಾರವಿದೆ? ಎಂದು ಪ್ರಶ್ನಿಸಿದ್ದಾರೆ