ಕಲಬುರಗಿ: ಸೇಡಂ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಡಾ.ನಾಗರೆಡ್ಡಿ ಪಾಟೀಲ್ (79) ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. ನಾಗರೆಡ್ಡಿ ಪಾಟೀಲ್ ಅವರ ಪುತ್ರ ಶಿವಶರಣರೆಡ್ಡಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 1983-85 ರ ಅವಧಿಯಲ್ಲಿ ಬಿಜೆಪಿ ಪಕ್ಷದಿಂದ ಶಾಸಕರಾಗಿದ್ದ ಡಾ. ನಾಗರೆಡ್ಡಿ ಅವರು ತದನಂತರ ಜನತಾದಳ ಸೇರ್ಪಡೆಯಾದರು. ಕಳೆದ ಎರಡು ದಶಕದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದರು. ಮೇ 6 ರಂದು ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.