ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಬಂಧನ

Advertisement

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನ ಬಂಧನವಾಗಿದೆ.
ಪ್ರಮುಖ ಆರೋಪಿ ಎನ್ನಲಾದ ಸುಳ್ಯದ ಮುಸ್ತಫಾ ಪೈಚಾರು ಎಂಬಾತ ಬಂಧಿತ ಎನ್ನಲಾಗಿದ್ದು, ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್​ಐಎ ತಂಡ ಹಾಸನ ಜಿಲ್ಲೆಯಲ್ಲಿ ಮೂವರನ್ನು ವಶಕ್ಕೆ ಪಡೆದುಕೊಂಡಿದೆ. ಸುಳ್ಯ ಮೂಲದ ಮುಸ್ತಾಫಾ ಪೈಚಾರು, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್‌ ನನ್ನು ಎನ್‌ಐಎ ತಂಡ ವಶಕ್ಕೆ ಪಡೆದುಕೊಂಡಿದೆ. ಸಕಲೇಶಪುರ ತಾಲೂಕಿನ ಆನೆಮಹಲ್‌ ಎಂಬಲ್ಲಿ ಆರೋಪಿಗಳನ್ನು ಎನ್‌ಐಎ ವಶಕ್ಕೆ ಪಡೆದುಕೊಂಡಿದೆ. ಆನೆಮಹಲ್‌ನ ಸಿರಾಜ್ ಬಳಿ ಮುಸ್ತಾಫಾ ಪೈಚಾರು ಹಾಗೂ ಇಲಿಯಾಸ್ ಕೆಲಸಕ್ಕೆ ಸೇರಿದ್ದರಂತೆ. ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್ ನನ್ನು ಎನ್​ಐಎ ಟೀಂ ವಶಕ್ಕೆ ಪಡೆದುಕೊಂಡಿದೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಮುಸ್ತಾಫಾ ಪೈಚಾರು ನಾಲ್ಕನೇ ಆರೋಪಿಯಾಗಿದ್ದಾನೆ. ಆರೋಪಿ ಮುಸ್ತಫಾಗೆ ಎನ್‌ಐಎ ಲುಕ್‌ ಔಟ್ ನೋಟೀಸ್ ಹೊರಡಿಸಿ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.