ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳನ್ನು ಬಿಜೆಪಿ ಇಟ್ಟುಕೊಂಡರೆ, ಒಂದು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ ಈಗ ವಿಧಾನ ಪರಿಷತ್ ಚುನಾವಣೆಯಲ್ಲೂ ಒಗ್ಗೂಡಿ ಸ್ಪರ್ಧಿಸಲು ತೀರ್ಮಾನಿಸಿವೆ. ಜೂನ್ 3ರಂದು ಮೇಲ್ಮನೆಗೆ ಚುನಾವಣೆ ನಡೆಯಲಿದೆ. ಈಶಾನ್ಯ ಪದವೀಧರ, ನೈರುತ್ಯ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಸ್ಪರ್ಧಿಸುತ್ತಿದೆ. ಇತ್ತ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಸ್ಪರ್ಧೆ ಮಾಡುತ್ತಿದೆ.