ಯುವ ಕವಿ ಲಕ್ಕೂರು ಆನಂದ ಇನ್ನಿಲ್ಲ

Advertisement

ಕೋಲಾರ: ದಲಿತ-ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಅನುವಾದಕಾರ ಲಕ್ಕೂರು ಸಿ ಆನಂದ(44) ಕಲಬುರಗಿ ಜಿಲ್ಲೆಯ ಕಡಗಂಚಿ ಗ್ರಾಮದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅವರು ನಿಧನರಾಗಿದ್ದಾರೆ.
ಮೂಲತಃ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಲಕ್ಕೂರಿನವರಾದ ಇವರು ದಲಿತ- ಬಂಡಾಯ ಕಾವ್ಯ ಮಾರ್ಗದ ಮೂರನೇ ತಲೆಮಾರಿನವರು.
ಕವಿ, ವಿಮರ್ಶಕ, ಅನುವಾದಕರಾಗಿಯೂ ಗುರುತಿಸಿಕೊಂಡಿರುವ ಆನಂದ ಅವರ ಮಾತೃಭಾಷೆ ತೆಲುಗು. ಪ್ರಸ್ತುತ ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲದೇ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಸಂಶೋಧನೆಯಲ್ಲಿ ತೊಡಗಿದ್ದರು. ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥ ಹೊರತಂದಿದ್ದರು.