ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Advertisement

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಲಿದೆ.
ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಏಪ್ರಿಲ್​ 19ರಿಂದ ಮೇ 16ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ 2 ಅನ್ನು ನಡೆಸಲಾಗಿತ್ತು. ಫಲಿತಾಂಶವನ್ನು ಇಲಾಖೆಯ ಜಾಲತಾಣದಲ್ಲಿ https://karresults.nic.in ವೀಕ್ಷಣೆ ಮಾಡಬಹುದಾಗಿದೆ.