ಮುಂಬೈ: ಉತ್ತರ ಪ್ರದೇಶ, ಮಹಾರಾಷ್ಟ್ರ, ಬಂಗಾಳ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಕಳಪೆ ಪ್ರದರ್ಶನದ ಹೊಣೆ ಹೊತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಇಂತಹ ಫಲಿತಾಂಶದ ಸಂಪೂರ್ಣ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ, ನಾನು ಪಕ್ಷದ ಹೈಕಮಾಂಡ್ಗೆ ನನ್ನ ಎಲ್ಲಾ ಸರ್ಕಾರದ ಜವಾಬ್ದಾರಿಯಿಂದ ಮುಕ್ತಗೊಳಿಸಿ ಎಂದು ಮನವಿ ಮಾಡುತ್ತೇನೆ. ಆಗ ನಾನು ಪಕ್ಷದ ಕೆಲಸಗಳನ್ನು ಮುಂದಿನ ಚುನಾವಣೆಗಾಗಿ ಪರಿಶ್ರಮದಿಂದ ಮಾಡಲು ಅನುಕೂಲವಾಗಲಿದೆ. ‘ನಾನು ಓಡಿಹೋಗುವ ಮನುಷ್ಯನಲ್ಲ. ಈ ಸೋಲಿನ ಹೊಣೆಯನ್ನು ನಾನು ಹೊರುತ್ತೇನೆ. ಸಾರ್ವಜನಿಕರ ಮಧ್ಯೆ ಹೋಗಿ ಹೊಸದಾಗಿ ಕೆಲಸ ಮಾಡುತ್ತೇನೆ. ನಾನು ಬಿಜೆಪಿ ಸಂಘಟನೆಯನ್ನು ಬಲಪಡಿಸುವತ್ತ ಗಮನ ಹರಿಸಲು ಬಯಸುತ್ತೇನೆ ಎಂದು ಫಡ್ನವೀಸ್ ಹೇಳಿದ್ದಾರೆ.