ದೇಶದಲ್ಲಿ ನೈಸರ್ಗಿಕ ಕೃಷಿಗೆ ಮತ್ತಷ್ಟು ಬಲ

Advertisement

ನವದೆಹಲಿ: ಆಹಾರ ಭದ್ರತೆಯನ್ನು ಖಾತರಿಪಡಿಸಲು ನಾವು ಬದ್ಧರಾಗಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಪಿಯೂಷ್ ಗೋಯಲ್ ಅವರಿಂದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವನಾಗಿ ಅಧಿಕಾರ ವಹಿಸಿಕೊಂಡ ಅವರು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಭಾರತದ ಜನರಿಗೆ ಆಹಾರ ಭದ್ರತೆಯನ್ನು ಖಾತರಿಪಡಿಸಲು ನಾವು ಬದ್ಧರಾಗಿದ್ದೇವೆ ಮತ್ತು ದೇಶದಲ್ಲಿ ನೈಸರ್ಗಿಕ ಕೃಷಿಯನ್ನು ಬಲಪಡಿಸಲು ಮತ್ತಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ. 2047 ರ ವೇಳೆಗೆ ಭಾರತದ ಇಂಧನ ಸ್ವಾತಂತ್ರ್ಯ ಸಾಧಿಸುವುದು ನಮ್ಮ ಸಂಕಲ್ಪವಾಗಿದೆ. ನವೀಕರಿಸಬಹುದಾದ ಇಂಧನದಲ್ಲಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ದೃಷ್ಟಿಯೊಂದಿಗೆ ನಾವು ಮುಂದುವರಿಯುತ್ತೇವೆ ಎಂದಿದ್ದಾರೆ.