ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳಕ್ಕೆ (Rozgar Mela) ಇಂದು ಚಾಲನೆ ನೀಡಿದ್ದಾರೆ. 10 ಲಕ್ಷ ಸಿಬ್ಬಂದಿಯನ್ನು ನೇಮಕಾತಿ ಮಾಡುವ ಅಭಿಯಾನ ಇದಾಗಿದೆ. ಈ ಸಮಾರಂಭದಲ್ಲಿ ಮೊದಲ ಹಂತದಲ್ಲಿ ಹೊಸದಾಗಿ ಸೇರ್ಪಡೆಗೊಂಡ 75 ಸಾವಿರ ಮಂದಿಗೆ ಇಂದು ನೇಮಕಾತಿ ಪತ್ರ ವಿತರಿಸಲಾಗಿದೆ. ಹಾಗೇ, ರೋಜ್‌ಗಾರ್ ಮೇಳದ ಪ್ರಯುಕ್ತ ವಿವಿಧ ಸರ್ಕಾರಿ ಉದ್ಯೋಗಗಳಿಗೆ ಆಯ್ಕೆಯಾದ ಕೆಲವು ಅಭ್ಯರ್ಥಿಗಳಿಗೆ ಕೇಂದ್ರ ಸಚಿವರು ದೇಶಾದ್ಯಂತ ವಿವಿಧ ಭಾಗಗಳಲ್ಲಿ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ್ದಾರೆ.