ಬ್ರಿಟನ್ ನೂತನ ಪ್ರಧಾನಿಯಾಗಿ ಭಾರತ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಯಾವುದೇ ಪ್ರತಿಸ್ಪರ್ಧಿಗಳಿಲ್ಲದೆ ರಿಷಿ ಆಯ್ಕೆ ಆಗಿದ್ದಾರೆ.
ಲಿಜ್ ಟ್ರಸ್ ಹೊರ ನಡೆದ ನಂತರ ಬ್ರಿಟನ್ ನೂತನ ಪ್ರಧಾನಿ ಆಯ್ಕೆಗೆ ಸಿದ್ಧತೆ ನಡೆದಿತ್ತು. ಕೊನೆ ಗಳಿಗೆಯಲ್ಲಿ ಪೆನ್ನಿ ಮೊರ್ಡಾಂಟ್ ರೇಸ್ನಿಂದ ಹಿಂದೆ ಸರಿದರು. ಆಗಲೇ ರಿಷಿ ಪ್ರಧಾನಿ ಪಟ್ಟಕ್ಕೇರುವುದು ಬಹುತೇಕ ಖಚಿತವಾಗಿತ್ತು. ಕೆಲ ತಿಂಗಳಿನ ಹಿಂದೆ ರಿಷಿ ಸುನಕ್ ಅವರನ್ನು ಸೋಲಿಸಿ ಪ್ರಧಾನಿ ಪಟ್ಟಕ್ಕೇರಿದ್ದ ಲಿಜ್ ಟ್ರಸ್ ಆರ್ಥಿಕ ಬಿಕ್ಕಟ್ಟು ಮತ್ತು ಸರ್ಕಾರದ ನೀತಿಯಿಂದಾಗಿ ಹಿನ್ನಡೆ ಅನುಭವಿಸಿ ಅಧಿಕಾರಕ್ಕೇರಿದ 45 ದಿನಗಳಲ್ಲಿ ರಾಜೀನಾಮೆ ಕೊಟ್ಟು ಹೊರನಡೆದಿದ್ದರು.