ಚೋರ್ಲಾ ಘಾಟ್‌ನಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ

ಕಾರು
Advertisement

ಬೆಳಗಾವಿ: ಗೋವಾದಿಂದ ಬೆಳಗಾವಿಗೆ ಬರುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಶನಿವಾರ ಚೋರ್ಲಾ ಘಾಟ್ ಬಳಿ ಸಂಭವಿಸಿದೆ.
ದಿಢೀರ್ ಕಾಣಿಸಿಕೊಂಡ ಬೆಂಕಿ ಕಂಡು ಹೆದರಿದ ಕಾರಿನಲ್ಲಿದ್ದವರು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಗಾಡಿಯಿಂದ ಇಳಿದು ದೂರಕ್ಕೆ ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ. ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಈ ದೃಶ್ಯವನ್ನು ಈ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದವರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಘಟನೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.