ದಕ್ಷಿಣ ಭಾರತದ ಖ್ಯಾತ ನಟಿ ರಂಭಾ ಅವರ ಕಾರು ಅಪಘಾತವಾಗಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ರಂಭಾ ಅವರು ತಮ್ಮ ಹಾನಿಗೊಳಗಾದ ಕಾರಿನ ಫೋಟೋಗಳನ್ನು ಪೋಸ್ಟ್ ಮಾಡಿದ್ದು, ಹೀಗೆ ಬರೆದುಕೊಂಡಿದ್ದಾರೆ. ” ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಹೋಗುವ ಮಾರ್ಗದಲ್ಲಿ ನಮ್ಮ ಕಾರಿಗೆ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ನನ್ನ ಪುಟ್ಟ ಸಾಶಾ ಇನ್ನೂ ಆಸ್ಪತ್ರೆಯಲ್ಲಿ ಕೆಟ್ಟ ದಿನಗಳು ಕೆಟ್ಟ ಸಮಯ ಅನುಭವಿಸುತ್ತಿದ್ದಾಳೆ. ದಯವಿಟ್ಟು ನಮಗಾಗಿ ಪ್ರಾರ್ಥಿಸಿ ನಿಮ್ಮ ಪ್ರಾರ್ಥನೆಗಳು ಬಹಳಷ್ಟು ಮುಖ್ಯ” ಎಂದು ನಟಿಯ ಮಗಳು ಸಶಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.