ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಕರ್ನಾಟಕ ಸರ್ಕಾರ ಗೌರವಿಸಿತು. ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಸುಧಾಮೂರ್ತಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ತುಂತುರು ಮಳೆಯಲ್ಲಿ ಸಾವಿರಾರು ಅಭಿಮಾನಿಗಳ ಹರ್ಷೋದ್ಘಾರದ ಮಧ್ಯೆ ಕರ್ನಾಟಕದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು.