ಕೋಲಾರ: ಬೆಂಗಳೂರಿನಲ್ಲಿ ಬಂದು ನೆಲೆಸಿದ್ದ ಗುಜರಾತ್ ವ್ಯಕ್ತಿಯೊಬ್ಬ ಪೊಲೀಸ್ ವಿಚಾರಣೆಗೆ ಹೆದರಿ ತನ್ನ ಮೂರು ವರ್ಷದ ಮಗಳನ್ನೂ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರ ತಾಲ್ಲೂಕು ಕೆಂದಟ್ಟಿ ಗ್ರಾಮದ ಕೆರೆಯಲ್ಲಿ ಕಳೆದ ರಾತ್ರಿ 3 ವರ್ಷದ ಮಗುವಿನ ಶವ ಪತ್ತೆಯಾಗಿದೆ. ಜೊತೆಗೆ ಕೆರೆಯ ದಡದಲ್ಲೇ ನೀಲಿ ಬಣ್ಣದ I-20 ಕಾರು ಸಹ ಪತ್ತೆಯಾಗಿದೆ. ಇದರಿಂದ ಅನುಮಾನಗೊಂಡ ಸ್ಥಳೀಯರು ಕೋಲಾರ ಗ್ರಾಮಾಂತರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲನೆ ನಡೆಸಿದ ಬಳಿಕ ಬೆಂಗಳೂರಿನ ಬಾಗಲೂರು ರಾಗಾ ಅಪಾರ್ಟ್ಮೆಂಟ್‌ನಲ್ಲಿ ವಾಸವಿರುವ, ಗುಜರಾತ್ ಮೂಲದ ಕುಟುಂಬ ಅನ್ನೋದು ಮಾಹಿತಿ ತಿಳಿದು ಬಂದಿದೆ
ಸ್ಥಳಕ್ಕೆ ಬಂದ ಪತ್ನಿ ಭವ್ಯ, ಪತಿ ರಾಹುಲ್ ಹಾಗೂ ಮೂರು ವರ್ಷದ ಮಗು ಜಿಯಾ ಎಂಬುದಾಗಿ ಗುರುತಿಸಿದ್ದಾರೆ. ನಿನ್ನೆ ಬೆಳಗ್ಗೆ ಮಗುವನ್ನು ಶಾಲೆಗೆ ಬಿಟ್ಟು ಬರೋದಾಗಿ ರಾಹುಲ್ ಹೇಳಿ ಹೋಗಿದ್ದರು. ಬಳಿಕ ಫೋನ್ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಈಗ ಶವವಾಗಿ ಪತ್ತೆಯಾಗಿದ್ದಾರೆ.
ರಾಹುಲ್ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿದೆ ಎಂದು ದೂರು ನೀಡಿದ್ದರು, ಹಲವು ದಿನಗಳ ನಂತರ ಇದು ಸುಳ್ಳು ದೂರು ಎಂಬುದು ತಿಳಿದು ಬಂದಿದೆ, ಈ ಸಂಬಂದ ನೆನ್ನೆ ವಿಚಾರಣೆಗೆ ಹಾಜರಾಗಲು ಪೊಲೀಸರು ಕರೆದಿದ್ದು, ತಾನೇ ಕಳುವು ಮಾಡಿ, ಒಡವೆ ಅಡವಿಟ್ಟು ಸುಳ್ಳು ದೂರು ನೀಡಿದ್ದ ರಾಹುಲ್ ಭಯ ಪಟ್ಟು ರಾಹುಲ್ ಏನಾದ್ರೂ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.