ನವದೆಹಲಿ: ಜೈಲಿನಲ್ಲಿ ಪ್ರಭಾವಿಗಳಿಗೆ ಬೇಕಾದ ಸೌಲಭ್ಯಗಳು ಸಿಗುತ್ತವೆ ಎಂಬ ಆಪಾದನೆಗಳು ಹಿಂದಿನಿಂದಲೂ ಕೇಳಿಬರುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತೆ ಸಿಸಿಟಿವಿ ದೃಶ್ಯಾವಳಿಯೊಂದು ವೈರಲ್ ಆಗಿದ್ದು ಅದರಲ್ಲಿ ತಿಹಾರ್ ಜೈಲಿನಲ್ಲಿರುವ ದೆಹಲಿಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಬಾಡಿ ಮಸಾದ್ ಮಾಡುತ್ತಿರುವ ದೃಶ್ಯವಿದೆ. ತಿಹಾರ್ ಜೈಲಿನಿಂದ ಸಚಿವರನ್ನು ಬೇರೆಡೆಗೆ ಶಿಫ್ಟ್ ಮಾಡುವಂತೆ ಭಾರತೀಯ ಜನತಾ ಪಾರ್ಟಿ ಒತ್ತಾಯಿಸಿದ ಬೆನ್ನಲ್ಲೇ ಈ ವಿಡಿಯೊ ವೈರಲ್ ಆಗಿದೆ.
ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನಲ್ಲಿ ವಿವಿಐಪಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ, ಮಸಾಜ್ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಕೆಲ ದಿನಗಳ ಹಿಂದೆ ಆರೋಪಿಸಿತ್ತು. ಅಲ್ಲದೆ, ಎಎಪಿ ನಾಯಕನಿಗೆ ವಿಶೇಷ ಸೌಲಭ್ಯಗಳನ್ನು ನೀಡಲು ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಜೈಲು ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಈಗ, ಈ ಆರೋಪಗಳಿಗೆ ಪುಷ್ಠಿ ನೀಡುವಂತೆ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲು ಸಂಖ್ಯೆ 7 ರೊಳಗೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ಸಿಸಿ ಕ್ಯಾಮೆರಾ ವಿಡಿಯೋ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿದ್ದು, ವೈರಲ್ ಆಗುತ್ತಿವೆ.