ಆಟೋದಲ್ಲಿ ನಿಗೂಢ ಸ್ಫೋಟ: ಭಯಬಿದ್ದ ಜನತೆ

ಸ್ಪೋಟ
Advertisement

ಮಂಗಳೂರು: ಕಂಕನಾಡಿ ಪೊಲೀಸ್ ಠಾಣೆ ಬಳಿ ಚಲಿಸುತ್ತಿದ್ದ ಅಟೋ ರಿಕ್ಷಾದಲ್ಲಿ ನಿಗೂಢ ರೀತಿಯಲ್ಲಿ ಸ್ಫೋಟ ಸಂಭವಿಸಿದ್ದು, ಜನತೆ ಭಯಗೊಂಡಿದ್ದಾರೆ. ನಾಗುರಿಯಿಂದ ಪಂಪ್‌ವೆಲ್ ಕಡೆಗೆ ಆಟೋರಿಕ್ಷಾ ಸಂಚರಿಸುತ್ತಿತ್ತು. ನಾಗುರಿಯಲ್ಲಿ ಆಟೋರಿಕ್ಷಾ ಏರಿದ್ದ ಪ್ರಯಾಣಿಕನ ಕೈಯಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ ಬೆಂಕಿ ಕಾಣಿಸಿದೆ. ಈ ವೇಳೆ ಬ್ಯಾಗ್ ಹಿಡಿದುಕೊಂಡ ವ್ಯಕ್ತಿಗೂ ಬೆಂಕಿ ತಗುಲಿದೆ. ಬೆಂಕಿ ತಗುಲಿದ ಸಂದರ್ಭ ಅಟೋ ಒಳಭಾಗ ಸುಟ್ಟು ಹೋಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ. ಬೆಂಕಿ ಕಾಣಿಸಿಕೊಂಡಿದೆ ಎಂದು ಅಟೋ ಚಾಲಕ ಹೇಳುತ್ತಿzನೆ. ಈ ಬಗ್ಗೆ ಸಮಗ್ರ ವಿಚಾರಣೆ ನಡೆಸಲಾಗುತ್ತದೆ. ಸ್ಫೋಟದ ಬಗ್ಗೆ ಪ್ರತ್ಯP ಸಾಕ್ಷಿಗಳು ಏನು ಹೇಳಿಲ್ಲ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.