ರಮೇಶ್ ಕುಮಾರ್‌ ವಿರುದ್ಧ ಅಸಭ್ಯ ಪದ ಬಳಕೆ: ಕುಮಾರಸ್ವಾಮಿ ವಿಷಾದ

HDK
Advertisement

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಜೆಡಿಎಸ್ ರಥಯಾತ್ರೆ ವೇಳೆ ಮಂಗಳವಾರ ಶಾಸಕ ಕೆ.ಆರ್.ರಮೇಶ್ ಕುಮಾರ್ ವಿರುದ್ಧ ಬಳಸಿದ ಅಸಭ್ಯ ಪದದ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಬುಧವಾರ ವಿಷಾದ ವ್ಯಕ್ತಪಡಿಸಿದ್ದಾರೆ. ಅಸಭ್ಯ ಪದ ಬಳಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬೆನ್ನಲೇ ಟ್ವೀಟ್ ಮಾಡಿರುವ ಅವರು, ‘ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ’ ಎಂದಿದ್ದಾರೆ.