ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಎಡಿಜಿಪಿ ಅಲೋಕ ಕುಮಾರ ಅವರು ಎರಡೂ ರಾಜ್ಯದ ಪೊಲೀಸ್ ಅಧಿಕಾರಿಗಳ ಸಭೆಯನ್ನು ನಿಪ್ಪಾಣಿಯಲ್ಲಿ ನಡೆಸಿದರು.
ನಾಳೆ ದಿ. 30ರಂದು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ಅಂತಿಮ ವಿಚಾರಣೆ ನಡೆಯಲಿರುವ ಹಿನ್ನಲೆಯಲ್ಲಿ ಈ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಸಭೆಯ ನಂತರ ತಮ್ಮನ್ನು ಭೆಟ್ಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಎಡಿಜಿಪಿ ಅವರು, ಕಳೆದ ವಾರ ಕರ್ನಾಟಕ ಸಾರಿಗೆ ನಿಗಮದ ಬಸ್‌ಗಳ ಮೇಲೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಿ ಮಸಿ ಬಳಿಯಲಾಗಿತ್ತು. ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.