ಗೂಂಡಾಗಳ ಮೇಲೆ ಕ್ರಮಕ್ಕೆ ಆಗ್ರಹ

Advertisement

ಧಾರವಾಡ: ಬೆಳಗಾವಿ ವಿವಾದವನ್ನು ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಅಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸುತ್ತಿರುವ ಗೂಂಡಾಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಎಂಬ ಭಾಷಾಂಧ ಗೂಂಡಾ ಸಂಘಟನೆಗೆ ಹಣಕಾಸಿನ ಬೆಂಬಲ ನೀಡಿ ಗಡಿಭಾಗದಲ್ಲಿ ದಾಂಧಲೆ ನಡೆಸಲು, ಕನ್ನಡಿಗರ ಮೇಲೆ ದಾಳಿ ನಡೆಸಲು ಕಾರಣರಾಗಿದ್ದಾರೆ. ಅವರ ಮೇಲೆ ಸೂಕ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.