ಹುಬ್ಬಳ್ಳಿ : ಗಣಿ ಉದ್ಯಮಿ ಜನಾರ್ದನರೆಡ್ಡಿ ಇಂದು ಸಂಜೆ 7 ಗಂಟೆಗೆ ಶ್ರೀ ಸಿದ್ಧಾರೂಢಮಠಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ.
ಡಿ.20 ರಂದು ಬೆಳಿಗ್ಗೆ 10 ಗಂಟೆಗೆ ಗದುಗಿನ ತೋಂಟದಾರ್ಯಮಠಕ್ಕೆ ಭೇಟಿ ನೀಡಲಿದ್ದು, ಡಿ.21 ರಂದು ಮಸ್ಕಿಯಲ್ಲಿ ಬೆಳಿಗ್ಗೆ 10 ಕ್ಕೆ ಪ್ರಮುಖರ ಸಭೆ ನಡೆಸಲಿದ್ದಾರೆ.
22 ರಂದು ಗಂಗಾವತಿಯಲ್ಲಿ ಬೆಳಿಗ್ಗೆ 10 ಗ್ರಾಮ ದೇವತೆ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು , ಬಳಿಕ ಪ್ರಮುಖರ ಸಭೆ ನಡೆಸಲಿದ್ದಾರೆ.
ಡಿ.25 ರಂದು ಬೆಳಿಗ್ಗೆ 10 ಕ್ಕೆ ಬೆಂಗಳೂರಿನ ಚಾಲುಕ್ಯ ಸರ್ಕಲ್ ನಲ್ಲಿರುವ ಪಾರಿಜಾತ ಅಪಾರ್ಟ್ ಮೆಂಟ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.