ಹುಬ್ಬಳ್ಳಿ: ರಸ್ತೆ ಅಗಲೀಕರಣಕ್ಕಾಗಿ ಭೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾದ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿವೆ.
ದರ್ಗಾದ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ನಾಳೆ ಬೆಳಿಗ್ಗೆ ತೆರುವುಗೊಳಿಸುವ ಸಾಧ್ಯತೆ ಇದೆ.
ಈ ನಿಟ್ಟಿನಲ್ಲಿ ಎಲ್ಲೆಡೆಯೂ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.