ಹಾವೇರಿ: ತಾಲ್ಲೂಕಿನ ಅಗಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ನೇಣಿಗೆ ಶರಣಾದ ಘಟನೆ ಇಂದು ನಡೆದಿದೆ.
ತಾಯಿ ಭಾರತಿ ಕಮಡೊಳ್ಳಿ(40), ಸೊಸೆ ಸೌಜನ್ಯ (20), ಪುತ್ರ ಕಿರಣ(21) ಮೃತ ದುರ್ದೈವಿಗಳು. ಮದುವೆಯಾಗಿ ಮೂರು ತಿಂಗಳಾಗಿತ್ತು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.