ಚಿತ್ರದುರ್ಗ: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ ಸರ್ಕಾರದ ಆದೇಶ ವಿರೋಧಿಸಿ ಚಿತ್ರದುರ್ಗದಲ್ಲಿ ಮಠಾಧೀಶರಿಂದ ಧರಣಿ ನಡೆಯಿತು.
ನಗರದ ಡಿಸಿ ವೃತ್ತದ ಬಳಿ ಮಠದ ಉಸ್ತುವಾರಿ ಬಸವಪ್ರಭು ಶ್ರೀ ನೇತೃತ್ವದಲ್ಲಿ ಧರಣಿ ಕುಳಿತ ಸ್ವಾಮೀಜಿಗಳು, ಆಡಳಿತಾಧಿಕಾರಿ ನೇಮಕ ಆದೇಶ ಹಿಂಪಡೆಯುವಂತೆ ಒತ್ತಾಯಿಸಿದರು. ಬಸವ ಕೇಂದ್ರದ 15ಕ್ಕೂ ಹೆಚ್ಚು ಮಠಾಧೀಶರು ಧರಣಿಯಲ್ಲಿ ಭಾಗಿಯಾಗಿದ್ದಾರೆ.