ಮಂಗಳೂರು: ಉಜಿರೆಯಲ್ಲಿ ನಡೆಯುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ವೀ. ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಪಾ ಸಭಾಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಫೆ. 3 ರಿಂದ 5ರವರೆಗೆ ನಡೆಯಲಿರುವ 25ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ವೀ. ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.