ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಹೀರಾಬೆನ್ ಅವರ ಆರೋಗ್ಯದಲ್ಲಿ ಬುಧವಾರ ಬೆಳಿಗ್ಗೆ ಏರುಪೇರಾಗಿದೆ. ಹೀಗಾಗಿ ಅವರನ್ನು ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ. ತಾಯಿಯ ಅನಾರೋಗ್ಯದ ಸುದ್ದಿ ತಿಳಿದು ಮಧ್ಯಾಹ್ನದ ವೇಳೆಗೆ ನರೇಂದ್ರ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಮೋದಿ ತಾಯಿಯ ಅನಾರೋಗ್ಯದ ಸುದ್ದಿ ತಿಳಿದ ಬೆನ್ನಲ್ಲೇ ಗುಜರಾತ್ನ ಅನೇಕ ಶಾಸಕರು ಯುಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.