ಕಾರವಾರ: ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಮೃತಪಟ್ಟವರನ್ನು ತಮಿಳುನಾಡು ಮೂಲದ ಅರಣ್ ಪಾಂಡ್ಯನ್, ನಿಫುಲ್, ಮಹ್ಮದ್ ಬಿಲ್ಲಾಲ್, ಶ್ರೇಕರನ್ ಮೃತಪಟ್ಟವರಾಗಿದ್ದಾರೆ. ಒಟ್ಟು ಐದು ಮಂದಿ ಗೋವಾದಲ್ಲಿ ಹೊಸ ವರ್ಷವನ್ನು ಆಚರಿಸಿಕೊಂಡು ಪುನಃ ಕಾರಿನಲ್ಲಿ ತಮಿಳುನಾಡಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಆದರೆ ಚಾಲಕನನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ತದಡಿ ಹುಬ್ಬಳ್ಳಿ ಬಸ್ ಗೆ ಡಿಕ್ಕಿಯಾಗಿದೆ. ಕಾರು ವೇಗವಾಗಿದ್ದ ಕಾರಣ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿ ಸಿಲುಕಿಕೊಂಡಿದ್ದ ಐವರನ್ನು ಸ್ಥಳೀಯರು ಹಾಗೂ ಪೊಲೀಸರು ತೆರವು ಮಾಡಿದ್ದಾರೆ. ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಓರ್ವನ ಸ್ಥಿತಿ ಕೂಡ ಗಂಭೀರವಾಗಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ