ಹುಬ್ಬಳ್ಳಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ನಮ್ಮ ವಿರೋಧವಿಲ್ಲ. ಈ ವಿಚಾರವಾಗಿ ಬಿಜೆಪಿ ನಾಯಕರು ರಾಜಕಾರಣ ಮಾಡುವುದಕ್ಕೆ ನಮ್ಮ ವಿರೋಧವಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಂದು ಧರ್ಮದ ವಿರುದ್ಧ ಎತ್ತಿಕಟ್ಟಲು ಹಾಗೂ ರಾಜಕೀಯವಾಗಿ ರಾಮ ಮಂದಿರ ಬಳಸಿಕೊಳ್ಳವುದು ಸರಿಯಲ್ಲ. ಪ್ರತಿ ಹಳ್ಳಿಯಲ್ಲಿ ರಾಮ ಹಾಗೂ ಆಂಜನೇಯ ಮಂದಿರಗಳಿವೆ. ನಾವು ಸಹ ರಾಮಮಂದಿರ ಕಟ್ಟಲು ಧನ ಸಹಾಯ ಮಾಡಿದ್ದೇವೆ ಎಂದರು.
ಕೋಮುವಾದ ಮಾಡುವ ಯಾವುದೇ ಪಕ್ಷಗಳು ಜನರನ್ನು ಆಳಲು ಯೋಗ್ಯವಲ್ಲ. ಧರ್ಮ ಹಾಗೂ ಜಾತಿ ಹೆಸರಲ್ಲಿ ರಾಜಕೀಯ ಮಾಡಿದರೇ ಅದು ತಪ್ಪು. ಸಮಾಜದಲ್ಲಿ ಹಿಂದು, ಮುಸ್ಲಿಂ, ಕ್ರೆöÊಸ್ತ ಸೇರಿದಂತೆ ಎಲ್ಲ ಧರ್ಮಗಳು ಸಮವಾಗಿವೆ. ಇವುಗಳ ಹೆಸರಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ನಾನು ಹಿಂದು ವಿರೋಧಿಯಲ್ಲಿ ಹಿಂದೂತ್ವದ ವಿರೋಧಿಯಾಗಿದ್ದೇನೆ ಎಂದು ಹೇಳಿದರು.
೧೯೨೫ ರಿಂದ ೪೭ ರವರೆಗೆ ಸ್ವಾತಂತ್ರ್ಯ ಹೋರಾಟದಲ್ಲಿ ಯಾವೊಬ್ಬ ಆರ್ಎಸ್ಎಸ್ ಹಾಗೂ ಹಿಂದೂ ಮಹಾಸಭಾಗಳು ಭಾಗವಹಿಸಿಲ್ಲ. ಆ ಸಮಯದಲ್ಲಿ ಸ್ವಾತಂತ್ರ್ಯ ಹೋರಾಟ ಗಂಭೀರ ಸ್ವರೂಪದಲ್ಲಿತ್ತು. ಆಗ ಆರ್ಎಸ್ಎಸ್ ಸಂಸ್ಥಾಪಕರಾಗಲಿ, ಪದಾಧಿಕಾರಿಗಳಾಗಲಿ ಯಾರಾದರೂ ಅದರಲ್ಲಿ ಭಾಗಿಯಾಗಿದ್ದರೇ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವಹೇಳನ ಮಾಡಲೆಂದು ನಾನು ನಾಯಿ ಮರಿ ಎಂದು ಹೇಳಿಲ್ಲ. ರಾಜ್ಯದ ಹಿತದೃಷ್ಟಿಯಿಂದ ಪ್ರಧಾನಿ ಬಳಿ ಅನುದಾನವನ್ನು ಧೈರ್ಯವಾಗಿ ಕೇಳಿ ಎಂದು ಹಳ್ಳಿಯ ಭಾಷೆಯಲ್ಲಿ ಹಾಗೇ ಹೇಳಿದ್ದೇನೆ. ಹಾಗಾದರೆ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜಾಹುಲಿ ಎನ್ನುತ್ತಾರೆ. ನನಗೆ ಟಗರು ಮತ್ತು ಹೌದ ಹುಲಿಯಾ ಎನ್ನುತ್ತಾರೆ ಅದನ್ನು ತಪ್ಪಾಗಿ ಅರ್ಥೈಸಿಕೊಂಡರೇ ಹೇಗೆ? ಎಂದರು.
ವಿಧಾನಸೌಧದ ಬಳಿ ಸಿಕ್ಕ ಹಣದ ಬಗ್ಗೆ ಮಾತನಾಡಿ, ಇಂಜಿನಿಯರ್ ಒಬ್ಬರು ವಿಧಾನಸೌಧಕ್ಕೆ ಏಕೆ ಹಣ ತಂದಿದ್ದರು?, ಮುಖ್ಯಮಂತ್ರಿ ಅಥವಾ ಯಾವುದಾದರೂ ಮಂತ್ರಿಗೆ ಲಂಚ ನೀಡಲು ಹೋದರು ಹೋಗಿರಬಹುದು. ಆ ಬಗ್ಗೆ ಸಮಗ್ರ ತನಿಖೆ ನಡೆಯಲಿ ಎಂದು ಹೇಳಿದರು.