ಹಿಂದಿಯಾಗಲಿ, ಇನ್ನಾವುದೇ ಭಾಷೆ ಹೇರಿಕೆ ಸಹಿಸಲ್ಲ; ಸಾಹಿತ್ಯ ಸಮ್ಮೇಳನದ ನಿರ್ಣಯ

Advertisement

ಹಾವೇರಿ: ಹಿಂದಿ ಅಥವಾ ಇನ್ನಾವುದೇ ಭಾಷೆ ಹೇರಿಕೆ ಸಹಿಸಲ್ಲ. ಅದನ್ನು ಖಂಡಿಸುತ್ತದೆ ಎಂಬುದು ಸೇರಿದಂತೆ 6 ನಿರ್ಣಯಗಳನ್ನು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಳ್ಳಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ನಿರ್ಣಯಗಳನ್ನು ಮಂಡಿಸಿದರು.

  • ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ವಿಧೇಯಕಕ್ಕೆ ಕೂಡಲೇ ಸುಗ್ರಿವಾಜ್ಞೆ ಹೊರಡಿಸಬೇಕು, ಕಾನೂನು ರೂಪ ಪಡೆದು ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು.
  • ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇರುವ ಮಹಾಜನ ವರದಿ ಅಂತಿಮ. ನ್ಯಾಯಾಲಯದ ಅಂತಿಮ ತೀರ್ಪಿನ ಮಾರ್ಗದರ್ಶನದಂತೆ ಸೂಕ್ತ ಕ್ರಮ ಜರುಗಿಸಬೇಕು.
  • ಕನ್ನಡ ಚಳವಳಿಗಾರರ ಮೇಲಿನ ಪ್ರಕರಣ ವಾಪಸ್ ಪಡೆಯಬೇಕು.
  • ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಯಶಸ್ವಿಯಾಗಿ ನಡೆಸಬೇಕು. ಕನ್ನಡ ಸಾಹಿತ್ಯ ಪರಿಷತ್ತನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.