ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್​ ತಡೆ

High Court
Advertisement

ಬೆಂಗಳೂರು: ಪಂಚಮಸಾಲಿ ಮೀಸಲು ನೀಡಬೇಕೆಂಬ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕಡಿವಾಣ ಹಾಕಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಿದೆ. ಪಂಚಮಸಾಲಿ ಸಮುದಾಯಕ್ಕೆ 2ಸಿ ಮತ್ತು 2ಡಿ ಮೀಸಲು ನೀಡದಂತೆ ಬೆಂಗಳೂರಿನ ಡಿ.ಜಿ. ರಾಘವೇಂದ್ರ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನ್ಯಾ. ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯಪೀಠ ಗುರುವಾರ ವಿಚಾರಣೆ ನಡೆಸಿತು. ಗುರುವಾರ ನಡೆದ ವಿಚಾರಣೆ ಅರ್ಜಿದಾರರ ಪರ ವಕೀಲರು, ಸರ್ಕಾರ ತರಾತುರಿಯಲ್ಲಿ ಮೀಸಲಾತಿ ಬಗ್ಗೆ ತೀರ್ಮಾನಿಸುವ ಸಾಧ್ಯತೆ ಇದೆ. ಮೀಸಲಾತಿ ಸಿಗುವುದು ಖಚಿತವೆಂದು ಆಡಳಿತಾರೂಢ ಪಕ್ಷದ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ತುರ್ತಾಗಿ ಅರ್ಜಿಯನ್ನು ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದರು. ಇದನ್ನು ಆಲಿಸಿದ ನ್ಯಾಯಪೀಠ ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ.