ಕಲಬುರಗಿ: ನೆಟೆ ರೋಗದಿಂದ ತೊಗರಿ ಬೆಳೆ ಹಾನಿಯಾಗಿದ್ದು, ಇಂದು ಸಂಜೆ ಕೃಷಿ, ಹಣಕಾಸು ಮತ್ತು ಇತರೆ ಸಂಬಂಧಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಪರಿಹಾರ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಭಾಗದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಕಲಬುರಗಿ ಮತ್ತು ಬೀದರ ಜಿಲ್ಲೆಯಲ್ಲಿ ಸುಮಾರು 2 ಲಕ್ಷ ಹೆಕ್ಟೇರ್ಕ್ಕೂ ಹೆಚ್ಚು ಪ್ರಮಾಣದಲ್ಲಿ ತೊಗರಿ ಬೆಳೆ ನಟೆ ರೋಗದಿಂದ ಹಾಳಾಗಿದೆ. ಪರಿಹಾರ ಎಷ್ಟು ಹೇಗೆ ಕೋಡಬೇಕು ಎನ್ನುವ ನಿರ್ಧಾನ ಮಾಡಲಾಗುತ್ತೆ. ಈ ಕುರಿತು ಸಭೆ ನಡೆಸಿ ಸೂಕ್ತ ಪರಿಹಾರ ಘೋಷಿಸಲಾಗುವುದು. ಅದಕ್ಕೆ ಪರಿಹಾರ ನೀಡಲು ರೈತರು ಕೂಡ ಒತ್ತಾಯ ಮಾಡಿದ್ದಾರೆ ಎಂದರು.