CD ವಿಚಾರ: ಇದು ಒಂದು ಝಲಕ್‌: ಇನ್ನು 120 ದಾಖಲೆ ಇವೆ

Advertisement

ಬೆಳಗಾವಿ: ಒಬ್ಬ ವ್ಯಕ್ತಿಯ ರಾಜಕೀಯ ಜೀವನವನ್ನು ಹಾಳು ಮಾಡಲು ಸಿಡಿ ಬಳಕೆ ಮಾಡಿದ ಆತ ರಾಜಕಾರಣದಲ್ಲಿ ನಾಲಾಯಕ್ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಹಾನಯಕನ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಡಿ.ಕೆ ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸಬೇಕು. ಸಿಬಿಐ ಸಂಪೂರ್ಣವಾಗಿ ವಿಚಾರಣೆ ನಡೆಸಬೇಕು ಎಂದಿದ್ದಾರೆ. ಒಬ್ಬ ವ್ಯಕ್ತಿಯ ರಾಜಕೀಯ ಜೀವನವನ್ನು ಹಾಳು ಮಾಡಲು ಸಿಡಿ ಬಳಕೆ ಮಾಡಿದ ಆತ ರಾಜಕಾರಣದಲ್ಲಿ ನಾಲಾಯಕ್ ಎಂದು ವಾಗ್ದಾಳಿ ನಡೆಸಿದ್ದಾರೆ. ನನ್ನ ಬಳಿ ಹಲವು ದಾಖಲೆಗಳಿವೆ, ತನಿಖೆಗಾಗಿ ನಾನು ಸಿಬಿಐಗೆ ನೀಡುತ್ತೇನೆ ಎಂದಿದ್ದಾರೆ.