ಬಜೆಟ್​ನಲ್ಲಿ ಕರ್ನಾಟಕಕ್ಕೆ ಬಂಪರ್ ಕೊಡುಗೆ: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಮೀಸಲು

Advertisement

ನವದೆಹಲಿ: ಮೋದಿ ಸರ್ಕಾರದ 5 ನೇ ಪೂರ್ಣ ಬಜೆಟ್ ಮತ್ತು 2024 ರ ಲೋಕಸಭಾ ಚುನಾವಣೆಯ ಹಿಂದಿನ ಕೊನೆಯ ಬಜೆಟ್ ಆಗಿದೆ. ಈ ಬಾರಿ ಮೋದಿ ಸರ್ಕಾರ ಕರ್ನಾಟಕಕ್ಕೆ ಭಾರಿ ಗಿಫ್ಟ್​ ನೀಡಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023 ಸಾಲಿನ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುತ್ತಿದ್ದಾರೆ. ಇದು ಮಧ್ಯ ಕರ್ನಾಟಕಕ್ಕೆ ನೀರುಣಿಸುವ ಬಹು ನಿರೀಕ್ಷಿತ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ಸಿಗಲು ಇನ್ನೊಂದು ಮೆಟ್ಟಿಲು ಬಾಕಿ ಇರುವಂತೆಯೇ ಕೇಂದ್ರದ ಬಜೆಟ್ ನಲ್ಲಿ 5300 ಕೋಟಿ ರೂ.ಗಳ ಅನುದಾನ ಪ್ರಕಟಿಸಿದ್ದು, ಚುನಾವಣೆ ಮುನ್ನ ರಾಜ್ಯದ ಪ್ರಮುಖ ನೀರಾವರಿ ಯೋಜನೆಗೆ ಭರ್ಜರಿ ಕೊಡುಗೆ ಸಿಕ್ಕಿದೆ.
ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾದ ಬಳಿಕ ಉಳಿಯುವ ಒಟ್ಟು ಕಾಮಗಾರಿಯ ವೆಚ್ಚದಲ್ಲಿ ಶೇ 60ರಷ್ಟನ್ನು ಕೇಂದ್ರ ಸರ್ಕಾರವೇ ನೀಡುತ್ತದೆ. ಕೇಂದ್ರದಿಂದ ಸುಮಾರು 5,300 ಕೋಟಿ ಸಿಗುವ ನಿರೀಕ್ಷೆ ಇದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಪೇಕ್ಷೆ ವ್ಯಕ್ತಪಡಿಸಿದ್ದರು. ಅದರಂತೆ ಇಂದು ಕೇಂದ್ರದ ಬಜೆಟ್ ನಲ್ಲಿ 5300 ಕೋಟಿ ರೂ‌.ಅನುದಾನ ಒದಗಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟ್​ ಮಾಡಿ ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಿದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು ಅರ್ಪಿಸಿದ್ದಾರೆ