BBMP ಕಚೇರಿಯಲ್ಲಿ ಬೆಂಕಿ ದುರಂತ ಪ್ರಕರಣ: ಮುಖ್ಯ ಇಂಜಿನಿಯರ್ ಶಿವಕುಮಾರ್ ನಿಧನ

Advertisement

ಬೆಂಗಳೂರು: ಬಿಬಿಎಂಪಿ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯ ಅಗ್ನಿ ದುರಂತದ ಪ್ರಕರಣದಲ್ಲಿ ಗಾಯಗೊಂಡಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಕೊನೆಯುಸಿರೆಳೆದಿದ್ದಾರೆ. ಕಳೆದ 11ರಂದು ಬಿಬಿಎಂಪಿ ಕ್ವಾಲಿಟಿ ಕಂಟ್ರೋಲ್ ರೂಂನಲ್ಲಿ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ 9 ಜನರು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಚಿಕಿತ್ಸೆ ಫಲಿಸದೇ ಇದೀಗ ಶಿವಕುಮಾರ್ ಕೊನೆಯುಸಿರೆಳೆದಿದ್ದಾರೆ.