ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 8ವಿಕೆಟ್ ಗಳ ಭರ್ಜರಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ.
ಟಾಸ್ ಸೋತು ಮೊದಲ ಬ್ಯಾಟ್ ಮಾಡಿದ ಮುಂಬೈ 7 ವಿಕೆಟ್ ಕಳೆದುಕೊಂಡು 171 ರನ್ ಗಳಿಸಿತ್ತು. ಗೆಲುವಿನ ಗುರಿ ಬೆನ್ನಟ್ಟಿದ RCB 16.2 ಓವರ್ ಗಳಲ್ಲಿ ಗುರಿ ತಲುಪಿತು. ವಿರಾಟ್ ಕೊಹ್ಲಿ(82*) ಫಾಫ್ ಡು ಪ್ಲೆಸೆಸ್(73) ಭರ್ಜರಿ ಬ್ಯಾಟಿಂಗ್ ಮೂಲಕ ಗೆಲುವಿನಲ್ಲಿ ಮಿಂಚಿದರು.